Pramod Muthalik ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಬೇಡವೇ. ನಿಮ್ಮ ಅಭಿಪ್ರಾಯ ಏನು?
Karkala consituancy: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ Pramod Muthalik ಅವರು ಈಗಾಗಲೇ ಹೇಳಿದ್ದು ತಾವು ಸ್ಪರ್ಧಿಸುವ ಕ್ಷೇತ್ರವನ್ನು ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ರವರು ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು ಕಾರ್ಕಳ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿರುವುದು ನಮೆಗೆಲ್ಲಾ ಗೊತ್ತೇ ಇದೆ.
ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದ(Karkala consituancy) ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದರೂ ಅವರಿಗೆ ಇಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗುವ ಭರವಸೆ ಇನ್ನು ದೊರೆತಿಲ್ಲ. ಆದರೆ ಮುತಾಲಿಕ್ ಅವರು ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಎಂದು ತಿಳಿದು ಬಂದಿದೆ.
ಪ್ರಮೋದ್ ಮುತಾಲಿಕ್ ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಮತ್ತು ಹಿಂದುತ್ವದ ಪರವಾಗಿದ್ದೇನೆ, ನಾನು ಗೆದ್ದ ನಂತರವೂ ನನ್ನ ಸಂಪೂರ್ಣ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ ಮತ್ತು ಹಿಂದು ವಿರೋಧಿಗಳ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.
ಪ್ರಮೋದ್ ಮುತಾಲಿಕ್ ರ ಈ ನಿರ್ಧಾರದಿಂದ ಕಾರ್ಕಳ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು ಹಾಲಿ ಶಾಸಕ ಇಂಧನ ಸಚಿವ ವಿ ಸುನಿಲ್ ಕುಮಾರ್ (Sunil Kumar) ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಂತಾಗಿದೆ. ಇದರಿಂದ ಸುನಿಲ್ ಕುಮಾರ್ ಮತ್ತು ಪ್ರಮೋದ್ ಮುತಾಲಿಕ್ ರವರ ನಡುವೆ ಮಾತಿನ ಸಮರ ಆಗಾಗ್ಗೆ ನಡೆಯುತ್ತಿದೆ.
ಇತ್ತೀಚಿಗೆ ಪರೋಕ್ಷವಾಗಿ ವಿ ಸುನಿಲ್ ಕುಮಾರ್ ರನ್ನು ಮಾತಿನಲ್ಲಿ ಕೆಣಕಿದ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರದಲ್ಲಿ(Karkala consituancy) ತನ್ನ ವರ್ಚಸ್ಸನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೈಕಮಾಂಡ್ ಇಷ್ಟರವರೆಗೆ ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ವಿಚಾರವನ್ನು ತಿಳಿಸದಿದ್ದದ್ದು ಕುತೂಹಲಕ್ಕೆ ಎಡೆ ಮಾಡಿದೆ.
ಇನ್ನು ಕಾರ್ಕಳದ ಮತದಾರರು ಯಾರಿಗೆ ಇಲ್ಲಿ ಮಣೆ ಹಾಕುತ್ತಾರೆ ಎಂದು ಕಾದು ನೋಡಬೇಕಿದೆ. ನೀವು ಕಾರ್ಕಳದ ಮತದಾರರೇ? ಅಥವಾ ನೀವು ನಿಮ್ಮ ಅಭಿಪ್ರಾಯ ತಿಳಿಸಬೇಕೇ? ಹಾಗಿದ್ದಲ್ಲಿ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂದು ಇಲ್ಲಿ ನೀವು ವೋಟ್ ಮಾಡುವ ಮುಖಾಂತರ ತಿಳಿಸಿ. ಮತ್ತು ನಿಮ್ಮ ಸ್ನೇಹಿತರಿಗೂ ಈ ಸರ್ವೆ ಹಂಚಿಕೊಳ್ಳಿ .
Read Also
- ಪುತ್ತೂರಿನಲ್ಲಿ ಬರುವ ವಿಧಾನಸಭಾ ಚುನಾವಣೆಗೆ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ.
- ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ