ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕ್ ಆಪ್ ಗೆ ಸಿದ್ದವಾಗಿದ್ದ, ದೆಹಲಿ ಮತ್ತು ಪುಣೆ ನಡುವಿನ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದ್ದು, ತಕ್ಷಣ ಇಲಾಖೆಯ ತಪಾಸಣಾ ತಂಡ ಎಚ್ಛೆತ್ತುಕೊಂಡಿದೆ. ಬಾಂಬ್ ಬೆದರಿಕೆ ಕರೆಯನ್ನು ನಿಲ್ದಾಣದ ಜಿಎಂಆರ್ ಕಾಲ್ ಸೆಂಟರ್ ಇಂದು ಅಂದರೆ ಶುಕ್ರವಾರ ಸ್ವೀಕರಿಸಿದೆ ಎಂದು ಎಎನ್ಐ ವರದಿ ಮಾಡಿದೆ. 

Bomb threat call to Delhi airport

ಬಾಂಬ್ ಬೆದರಿಕೆ ಕರೆ ಬಂದ ತಕ್ಷಣ ಎಚ್ಚೆತ್ತುಕೊಂಡ ತನಿಖಾ ತಂಡ ವಿಸ್ತಾರ ವಿಮಾನದಿಂದ ಎಲ್ಲಾ ಪ್ರಯಾಣಿಕರನ್ನು ಮತ್ತು ಅವರ ಲಗೇಜ್ ಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ರಾಜಧಾನಿಯ ವಿಮಾನ ನಿಲ್ದಾಣದಲ್ಲಿದ್ದ ವಿಮಾನಕ್ಕೆ ಬಂದ ಬಾಂಬ್ ಬೆದರಿಕೆ ಕರೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ, ಪ್ರತ್ಯೇಕ ಸ್ಥಳಕ್ಕೆ ಕೊಂಡು ಹೋಗಿ ತೀವ್ರವಾದ ತಪಾಸಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 

   

 

Leave a Comment

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇ-ಕೆವೈಸಿ ಮೊಬೈಲಿನಲ್ಲಿಯೇ ಮಾಡಿಕೊಳ್ಳಿ