ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ
ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಕೆಯ್ಯೂರು ಇವರ ಆಶ್ರಯದಲ್ಲಿ ದಿನಾಂಕ 25 ಆಗಷ್ಟ್ 2023 ನೇ ಶುಕ್ರವಾರದಂದು ಪೂರ್ವಾಹ್ನ ಗಂಟೆ 9.30 ರಿಂದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರಿನಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಹೇಳಿದ್ದಾರೆ.
ಈಗಾಗಲೇ ಆಮಂತ್ರಣ ಪಾತ್ರ ಸಾರ್ವಜನಿಕರಿಗೆ ಲಭ್ಯ ಇದ್ದು, ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮಿ ದೇವಿ ಮತ್ತು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪನಾ ಸಮಿತಿ ಈ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.
ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ
ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಇಲ್ಲಿ ದಿನಾಂಕ 21 ಆಗಷ್ಟ್ 2023 ನೇ ಸೋಮವಾರದಂದು ಪೂರ್ವಾಹ್ನ ಗಂಟೆ 9.00 ರಿಂದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರಿನಲ್ಲಿ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದ್ದಾರೆ.
ಈಗಾಗಲೇ ಆಮಂತ್ರಣ ಪಾತ್ರ ಸಾರ್ವಜನಿಕರಿಗೆ ಲಭ್ಯ ಇದ್ದು, ನಾಗರ ಪಂಚಮಿ ಹಬ್ಬದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ನಾಗದೇವರ ಮತ್ತು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪನಾ ಸಮಿತಿ ಈ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.
ನಾಗದೇವರಿಗೆ ಅಭಿಷೇಕ ಮಾಡಲು ಬರುವವರು ಹಾಲು ಮತ್ತು ಸಿಯಾಳ ತರಬೇಕು ಮತ್ತು ಬೆಳಗ್ಗೆ 9 ಗಂಟೆಗೆ ದೇವಸ್ಥಾನಕ್ಕೆ ತಲುಪಬೇಕು. ಹಾಗೇನೇ ನಾಗತಂಬಿಲಕ್ಕೆ ರೂಪಾಯಿ 150 ಕೊಟ್ಟು ರಶೀದಿ ಪಡೆದುಕೊಳ್ಳಬೇಕು ಎಂದು ಆಡಳಿತ ಮಂಡಳಿ ತಿಳಿಸಿದ್ದಾರೆ.