ಮಹಿಳೆಯ ಮೇಲೆ ಅತ್ಯಾಚಾರ, ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಲು ಯತ್ನ, ವ್ಯಕ್ತಿ ಬಂಧನ

ಕಳೆದ ತಿಂಗಳು ಫರ್ಹಾಜ್ ತನಗೆ ಮಾದಕ ವಸ್ತು ಬೆರೆಸಿದ ತಂಪು ಪಾನೀಯ ನೀಡಿ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮಹಿಳೆ ಜುಲೈ 7 ರಂದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಕೃತ್ಯದ ವಿಡಿಯೋ ಬಳಸಿ ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಫರ್ಹಾಜ್ (27) ಎಂದು ಗುರುತಿಸಲಾಗಿದೆ.

ಕಳೆದ ತಿಂಗಳು ಫರ್ಹಾಜ್ ತನಗೆ ಮಾದಕ ವಸ್ತು ಬೆರೆಸಿದ ತಂಪು ಪಾನೀಯ ನೀಡಿ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಜುಲೈ 7 ರಂದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೆ ಮಹಿಳೆ ವಿರೋಧಿಸಿದಾಗ, ಆತ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕೃತ್ಯದ ವಿಡಿಯೋವನ್ನು ರೆಕಾರ್ಡ್ ಮಾಡಿ, ಅದನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಮಹಿಳೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಲ್ಲದೆ, ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ನಿಪುಣ್ ಅಗರ್‌ವಾಲ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾದ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಮಂಗಳವಾರ ಫರ್ಹಾಜ್‌ನನ್ನು ಬಂಧಿಸಲಾಗಿದೆ.

Leave a Comment